Mini Job mela in Bellary July 11th 2024

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ july 11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ

ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಈ ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ

ಮಾಡಿಕೊಳ್ಳುವರು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ Adhaar card ಮತ್ತು Resume ಗಳೊಂದಿಗೆ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094 ಗೆ ಸಂಪರ್ಕಿಬಹುದು .

Leave a Reply